ಕೊರೋನಾ ವಿರುದ್ಧ ಹೋರಾಡಲು ಪ್ರಧಾನ ಮತ್ರಿ ಪರಿಹಾರ ನಿಧಿಗೆ ಬರೋಬ್ಬರಿ 25 ಕೋಟಿ ರೂ. ನೀಡಿದ ಅಕ್ಷಯ್ ಕುಮಾರ್

ಕೊರೋನಾ ಮಹಾಮಾರಿ ಪ್ರಪಂಚದಾದ್ಯಂತ ಮರಣಮೃದಂಗ ಬಾರಿಸುತ್ತಾ ಅಟ್ಟಹಾಸ ಮೆರೆಯುತ್ತಿದೆ. ಕಿಲ್ಲರ್ ಕೊರೋನಾ ವಿರುದ್ಧ ಭಾರತ ಲಾಕ್ ಡೌನ್ ಹೋರಾಟ ಮಾಡುತ್ತಿದೆ. ಇದೆ ಹೊತ್ತಲ್ಲಿ ಪ್ರಧಾನಿ ಮೋದಿ ದೇಶವಾಸಿಗಳಲ್ಲಿ ಹಣಕಾಸಿನ ನೆರವನ್ನು ಕೋರಿದ್ದಾರೆ. ಈ ಕೊರೊನಾ ನಿಯಂತ್ರಣ ಕ್ರಮಕ್ಕಾಗಿ ದೇಶದ ಜನರು ಕೈಜೋಡಿಸಿ, ಹಣಕಾಸಿನ ನೆರವನ್ನು ನೀಡುವಂತೆ ಮನವಿ ಮಾಡಿದ್ದಾರೆ.ಇದಕ್ಕೆ ಕ್ಷಣಮಾತ್ರದಲ್ಲೇ ಸ್ಪಂದಿಸಿದ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ ಉಳಿತಾಯದಿಂದ ಬರೋಬ್ಬರಿ 25 ಕೋಟಿ ರೂ. ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

Comments