ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡುವವರ ಆಸ್ತಿ ಜಪ್ತಿ ಮಾಡಲು ಆದೇಶ ಹೊರಡಿಸಿದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮೊರದಾಬಾದ್ ನಲ್ಲಿ  ಪೊಲೀಸ್ ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರ ಆಸ್ತಿ ಪಾಸ್ತಿಯನ್ನು ಜಪ್ತಿ ಮಾಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ .ದಿನಗಳ ಹಿಂದೆಯಷ್ಟೇ ಮೊರದಾಬಾದ್ ಪ್ರದೇಶದಲ್ಲಿ ಕೊರೊನ  ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್  ಗೆ ದಾಖಲಿಸಲು ಆಗಮಿಸಿದ ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಮಹಿಳೆಯರು ಸೇರಿ ಕಲ್ಲು ತೂರಾಟ ನಡೆಸಿದ್ದರು.

 ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ವೈದ್ಯಕೀಯ ಸಿಬ್ಬಂದಿಗಳಿಗೆ ಗಾಯಗಳಾಗಿದ್ದವು ನಂತರದ ಬೆಳವಣಿಗೆಯಲ್ಲಿ ಎಲ್ಲಾ ಆರೋಪಿಗಳನ್ನು ಹೆಡೆಮುರಿ ಕಟ್ಟಿ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು .ಈ ಸಂಬಂಧ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಯೋಗಿ ಆದಿತ್ಯನಾಥ್ ಅವರು  ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡುವ ವ್ಯಕ್ತಿಗಳ ಆಸ್ತಿಯನ್ನು ಜಪ್ತಿ ಮಾಡಿ ನಷ್ಟವನ್ನು ಅವರೇ ಭರಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ .

ಈ ಸಂಬಂಧ ಮಾಧ್ಯಮದ ಜೊತೆ ಮಾತನಾಡಿರುವ ಗೃಹ ಇಲಾಖೆಯ ಮುಖ್ಯ ಕಾರ್ಯದರ್ಶಿ ಅವಿನಾಶ್ ಕುಮಾರ್  ಅವರು ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಮತ್ತು ಪೊಲೀಸರಿಗೆ ರಕ್ಷಣೆಯನ್ನು ನೀಡಲಾಗುತ್ತದೆ ಮುಖ್ಯಮಂತ್ರಿಗಳು ಕೂಡ ಈ ಸಂಬಂಧ ವ್ಯಕ್ತಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಕಾಯ್ದೆಯನ್ನು  ಉಲ್ಲಂಘಿಸುವವರಿಗೆ ಹನ್ನೆರಡು ತಿಂಗಳು ಜೈಲು ವಿಧಿಸಬಹುದಾಗಿದೆ   .ಇನ್ನು ಮೊರದಾಬಾದ್ ಘಟನೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 17  ಜನರನ್ನು ಬಂಧಿಸಿದ್ದಾರೆ ಎಂದು ಅವರು ತಿಳಿಸಿದರು.

Comments