ಪ್ರಾಣವನ್ನೇ ಪಣಕ್ಕಿಟ್ಟು ಕೊರೊನ ಸೋಂಕಿತರ ರಕ್ಷಣೆ ಮಾಡಲು ಹಗಲು ರಾತ್ರಿ ದುಡಿಯುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಕ್ವಾರಂಟೈನ್ ನಲ್ಲಿರುವ ಜಮಾತ್ ಕಾರ್ಯಕರ್ತರು ಉಗುಳುತ್ತಿರುವ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ.ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ತಬ್ಲೀಘಿ ಜಮಾತ್ ಮಸೀದಿಯಿಂದ ವಶಕ್ಕೆ ಪಡೆಯಲಾದ ತಬ್ಲೀಘಿ ಜಮಾತ್ ಕಾರ್ಯಕರ್ತರನ್ನು ಕ್ವಾರಂಟೈನ್ ಮಾಡಲಾಗಿದ್ದು, ಅವರ ಮೇಲ್ವಿಚಾರಣೆ ಮತ್ತು ಚಿಕಿತ್ಸೆಗಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಆದರೆ ಈ ವೈದ್ಯರು ಮತ್ತು ಸಿಬ್ಬಂದಿಗಳ ವಿರುದ್ಧವೇ ಜಮಾತ್ ಕಾರ್ಯಕರ್ತರು ಅಸಭ್ಯವಾಗಿ ವರ್ತಿಸುತ್ತಿದ್ದು, ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಉಗುಳುತ್ತಿದ್ದಾರೆ.ಇನ್ನು ವಿಡಿಯೋ ಒಂದರಲ್ಲಿ ಜಮಾತ್ ಕಾರ್ಯಕರ್ತರು ವೈದ್ಯರ ಮೇಲೆ ಕಲ್ಲು ತೂರಾಟ ನಡೆಸುವುದು ಕಂಡು ಬಂದಿದೆ.ವಿಡಿಯೋ ನೋಡಿ
Comments
Post a Comment