ಯೋಗಿಜೀ ಮಾದರಿಯಲ್ಲಿ ದಾಳಿಕೋರರ ವಿರುದ್ಧ ಸುಗ್ರೀವಾಜ್ಞೆ ಜಾರಿ ಮಾಡಿದ ಬಿಎಸ್ ವೈ

ಬೆಂಗಳೂರು :ಪಾದರಾಯನಪುರದಲ್ಲಿ ಗೂಂಡಾಗಿರಿ ನಡೆದಿದೆ ,ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಯಾವುದೇ ಕಾರಣಕ್ಕೂ ಸಹಿಸೋದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಆರೋಗ್ಯ ಸಿಬ್ಬಂದಿಗೆ ಸೂಕ್ತ ಭದ್ರತೆಯನ್ನು ಕಲ್ಪಿಸುವಂತೆ ಸೂಚಿಸಿದ್ದಾರೆ.

ಇಂದು ಸಚಿವ ಸಂಪುಟದ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಪಾದರಾಯನಪುರ ದಲ್ಲಿ ನಡೆದ ಘಟನೆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರೆ ಸಹಿಸುವುದಿಲ್ಲ. ಕೇರಳ ಮತ್ತು ಉತ್ತರ ಪ್ರದೇಶದಲ್ಲಿ ಇಂತಹ ಘಟನೆಗಳು ನಡೆದರೆ ಅದು ಶಿಕ್ಷಾರ್ಹ ಅಪರಾಧ. ಇದೇ ಮಾದರಿಯನ್ನು ರಾಜ್ಯದಲ್ಲೂ ಸಹ ಜಾರಿಗೆ ತರಲು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದರು.

ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆದರೆ ಅದು ಶಿಕ್ಷಾರ್ಹ ಅಪರಾಧ ಎಂದು ಸುಗ್ರೀವಾಜ್ಞೆ ಹೊರಡಿಸುತ್ತೇವೆ. ಅವರ ಆರೋಗ್ಯದ ದೃಷ್ಟಿಯಿಂದ ನಾವು ಕ್ರಮ ತೆಗೆದು ಕೊಳ್ಳುತ್ತಿದ್ದೇವೆ. ಇವರೆಲ್ಲಾ ಕಾನೂನು ಕೈಗೆ ತೆಗೆದುಕೊಂಡವರಂತೆ ವರ್ತನೆ ಮಾಡುತ್ತಿದಾರೆ. ಇದನ್ನು ಸಹಿಸುವುದಿಲ್ಲ. ಪ್ರಕರಣ ಸಂಬಂಧ ಈಗಾಗಲೇ 54 ಜನರನ್ನು ಬಂಧಿಸಲಾಗಿದೆ ಎಂದು ಸಿಎಂ ತಿಳಿಸಿದರು.


Comments