ಮದ್ಯ ಪ್ರಿಯರಿಗೆ ಸಿಹಿ ಸುದ್ದಿ !

ಏಪ್ರಿಲ್‌ 14ರ ನಂತರವೂ ಕೊರೊನಾ ಲಾಕ್‌ಡೌನ್‌ ಮುಂದುವರಿದರೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ಸಾಧ್ಯತೆಗಳು ಹೆಚ್ಚಿದೆ.ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಮಾತ್ರವಲ್ಲ ರಾಜ್ಯ ಸರಕಾರದ ಪ್ರಮುಖ 2ನೇ ಆದಾಯ ಮೂಲ ಆಗಿರುವುದರಿಂದ ಸೀಮಿತ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ಕೊಡುವ ಬಗ್ಗೆ ಸರಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ. ಈ ಬಗ್ಗೆ ಅಬಕಾರಿ ಇಲಾಖೆಯು ಸರಕಾರಕ್ಕೆ ವರದಿ ಸಲ್ಲಿಸಿದೆ.

ಮೂಲದ ಪ್ರಕಾರ ಏ. 14ರ ಬಳಿಕ ಲಾಕ್‌ಡೌನ್‌ ವಿಸ್ತರಣೆಯಾದರೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ಕೊಡುವ ಬಗ್ಗೆ ಸರಕಾರ ಒಲವು ತೋರಿದೆ. ಆದರೆ ಯಾವುದೇ ರೀತಿಯ ಪಬ್‌, ಕ್ಲಬ್‌, ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳು ತೆರೆಯುವುದಿಲ್ಲ. ಕೇವಲ ಮದ್ಯದಂಗಡಿಗಳು, ಎಂಎಸ್‌ಐಎಲ್‌ ಹಾಗೂ ಎಂಆರ್‌ಪಿ ಮಳಿಗೆಗಳಲ್ಲಿ ಮಾತ್ರ ಮಾರಾಟಕ್ಕೆ ಅವಕಾಶ ಇರುತ್ತದೆ, ಅಲ್ಲಿ ಯಾವುದೇ ಕಾರಣಕ್ಕೂ ಸೇವನೆ ಮಾಡುವಂತಿಲ್ಲ. ಪಾರ್ಸೆಲ್‌ ಮಾತ್ರ ತೆಗೆದುಕೊಳ್ಳಬಹುದಾಗಿದೆ.


Comments