ಸುಳ್ಳು ಆರೋಪದ ಮೇಲೆ ಗುಂಪೊಂದು ಇಬ್ಬರು ಸಾಧುಗಳು ಸೇರಿದಂತೆ ಮೂವರ ಹತ್ಯೆ

ಮಹಾರಾಷ್ಟ್ರದಲ್ಲಿ ದೇಶವನ್ನೇ ಬೆಚ್ಚಿ ಬೀಳಿಸುವ ಅಮಾನುಷ ಗುಂಪು ಹಲ್ಲೆಯ ಪ್ರಕರಣ ವರದಿಯಾಗಿದೆ .ಮಕ್ಕಳನ್ನು ಅಪಹರಿಸಿ ಅಂಗಾಂಗಳನ್ನು ಕಿತ್ತು ಮಾರಾಟ ಮಾಡುತ್ತಾರೆ ಎಂಬ ಸುಳ್ಳು ಆರೋಪದ ಮೇಲೆ ಗುಂಪೊಂದು ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದು, ರಕ್ಷಣೆಗೆ ಧಾವಿಸಿದ ಪೊಲೀಸರ ಮೇಲೂ ಗ್ರಾಮಸ್ಥರು ಹಲ್ಲೆ ಮಾಡಿದ ಘಟನೆ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ನಡೆದಿದೆ.

 ಪರಿಚಯಸ್ಥರ ಅಂತ್ಯಸಂಸ್ಕಾರಕ್ಕೆಂದು ಮುಂಬೈಗೆ ತೆರಳುತ್ತಿದ್ದ ಇಬ್ಬುರ ಸಾಧುಗಳು ಓರ್ವ ಚಾಲಕನನ್ನು ಮಕ್ಕಳ ಕಳ್ಳರೆಂದು ಗ್ರಾಮಸ್ಥರು ಭಾವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರನ್ನು ಕಾರಿನಿಂದ ಹೊರಗೆಳೆದ ಗುಂಪು ಬಡಿಗೆಗಳಿಂದ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಕೊಂದು ಹಾಕಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸ್ ವಾಹನದ ಮೇಲೂ ಗ್ರಾಮಸ್ಥರು ಹಲ್ಲೆ ಮಾಡಿದ್ದು, ಪೊಲೀಸರೂ ಕೂಡ ಹಲ್ಲೆಗೆ ಪ್ರಚೋದನೆ ನೀಡಿದ ಆರೋಪವೂ ಕೇಳಿ ಬಂದಿದೆ. ಮೃತರರನ್ನು ಇಬ್ಬರು ವೃದ್ಧ ಸಾಧುಗಳು ಹಾಗೂ ಕಾರಿನ ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ.ಇನ್ನು ಪಾಲ್ಗರ್ ಘಟನೆಗೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು,ವಿಡಿಯೋದಲ್ಲಿ ಕೆಲವು ಪೊಲೀಸರು ಉದ್ದೇಶಪೂರ್ವಕವಾಗಿ ಸಾಧುಗಳನ್ನು ಉದ್ರಿಕ್ತ ಗುಂಪಿನೆಡೆಗೆ ನೂಕಿದ ದೃಶ್ಯ ಕಂಡು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ .

Comments