ತಬ್ಲೀಘಿ ಗಳ ವರ್ತನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ :ನಮ್ಮ ಕಾರ್ಯಕರ್ತರ ಬೆಂಬಲಕ್ಕೆ ನಾನು ನಿಲ್ಲುತ್ತೇನೆ. ಇದೆ ನನ್ನ ಪ್ರಥಮ ಆದ್ಯತೆ ಎಂದ ಸುನಿಲ್ ಕುಮಾರ್

ದೆಹಲಿಯ ನಿಜಾಮುದ್ದೀನ್ ಸಮಾವೇಶದಲ್ಲಿ ಭಾಗಿಯಾದ ಹೆಚ್ಚಿನ ತಬ್ಲೀಘಿ ಕಾರ್ಯಕರ್ತರು ಕೋರನ ಸೋಂಕಿಗೆ ಒಳಗಾಗಿ ಹಲವರು ತಲೆಮರೆಸಿಕೊಂಡ ಬೆಳವಣಿಗೆಯ ನಂತರ ಸಾಮಾಜಿಕ ಜಾಲತಾಣದಲ್ಲಿ ತಬ್ಲೀಘಿ ಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು .ಈ ರೀತಿ ಆಕ್ರೋಶಕ್ಕೆ ಒಳಗಾದ ಸಂದರ್ಭ ಹಲವು ಕಡೆ ಒಂದು ಸಮುದಾಯವನ್ನು ಉಲ್ಲೇಖಿಸಿ ಆರೋಪ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಚಕಾರ  ಎತ್ತಿದ್ದವು . ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಒಂದು ಸಮುದಾಯವನ್ನು ಗುರಿಯಾಗಿಸಿ ಯಾರೂ ಹೇಳಿಕೆ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರು.

ನಂತರದ ಬೆಳವಣಿಗೆಯಲ್ಲಿ ಹಲವರು ಹಿಂದೂ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ  ಜರುಗಿಸುವ ಹುನ್ನಾರ ನಡೆದ ಬೆಳವಣಿಗೆಯಲ್ಲಿ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಶಾಸಕ ರೇಣುಕಾಚಾರ್ಯ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಅವರು ತಬ್ಲೀಘಿ ಗಳ ವಿರುದ್ಧ ಕಿಡಿಕಾರಿ ಕಾರ್ಯಕರ್ತರನ್ನು ಸಮರ್ಥಿಸುವ ಕೆಲಸವನ್ನು ಮಾಡಿದ್ದರು. ಇದೀಗ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು  ತಬ್ಲೀಘಿ ಗಳ ವರ್ತನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಅವರ ವಿರುದ್ಧ ಮಾತನಾಡಿದ ಕಾರ್ಯಕರ್ತರ ಬೆಂಬಲಕ್ಕೆ ನಾನು ನಿಲ್ಲುತ್ತೇನೆ. ಇದೆ ನನ್ನ ಪ್ರಥಮ ಆದ್ಯತೆ. ಎಂದು ಟ್ವೀಟ್ ಮಾಡಿದ್ದಾರೆ .

ತಬ್ಲೀಘಿಗಳ ವಿರುದ್ಧ ಹಿಂದುತ್ವ ಪ್ರತಿಪಾದಕರು ಕಿಡಿ ಕಾಡುತ್ತಿರುವುದು ವಿರೋಧ ಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ .ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಡಿಕೆಶಿ ಅವರು ಈ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.


Comments