ಹಲವು ರಾಜ್ಯಗಳಲ್ಲಿ ಪ್ರಕರಣ ದಾಖಲಿಸಿದ ಕಾಂಗ್ರೆಸ್ : ಅರ್ನಬ್ ಗೋಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ಆದೇಶ ನೀಡಿದ ಸುಪ್ರೀಂ ಕೋರ್ಟ್

ಪಾಲ್ಘರ್ ಸಾಧುಗಳ ಹತ್ಯೆ ಪ್ರಕರಣ  ಸಂಬಂಧ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆರೋಪ ಮಾಡಿದ್ದ ಕಾರಣಕ್ಕಾಗಿ ರಿಪಬ್ಲಿಕ್  ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಕಾಂಗ್ರೆಸ್ ನಾಯಕರು ದೇಶದ ಹಲವು ರಾಜ್ಯಗಳಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅರ್ನಬ್ ಗೋಸ್ವಾಮಿ ಅವರು ತನ್ನ ವಿರುದ್ಧ ದಾಖಲಿಸಿದ ಎಲ್ಲ ದೂರನ್ನು ವಜಾಗೊಳಿಸಬೇಕೆಂದು ಸುಪ್ರೀಂ ಕೋರ್ಟ್ನಲ್ಲಿ ದಾವೆ ಹೂಡಿದ್ದರು.

ಈ ವಿಚಾರವಾಗಿ ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ನಾಬ್ ಗೋಸ್ವಾಮಿ ಅವರಿಗೆ ಮೂರು ವಾರಗಳ ಮಧ್ಯಂತರ ರಕ್ಷಣೆ ನೀಡುವ ಜೊತೆಗೆ ಅರ್ಜಿದಾರ ಅರ್ನಬ್ ಗೋಸ್ವಾಮಿ ಅವರ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ಜರುಗಿಸುವಂತಿಲ್ಲ ಮತ್ತು ಅರ್ಜಿದಾರರು ನಿರೀಕ್ಷಿತ ಜಾಮೀನು ಅರ್ಜಿಯನ್ನು ಮೂರು ವಾರಗಳಲ್ಲಿ ಸಲ್ಲಿಸಬಹುದು ಎಂದು ತನ್ನ ಆದೇಶದಲ್ಲಿ ತಿಳಿಸಿದೆ ಎಂದು ವರದಿಯಾಗಿದೆ .ಅರ್ನಬ್ ಗೋಸ್ವಾಮಿ ಅವರು ಸೋನಿಯಾ ಗಾಂಧಿ ವಿರುದ್ಧ ನೀಡಿದ ಹೇಳಿಕೆ ಕುರಿತಾಗಿ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಅಲ್ಲದೆ ಅರ್ನಬ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಕೂಡ ಮಾಡಿದ್ದರು .

Comments