ಕೊರೊನ ವೈರಸ್ ನಿರ್ವಹಣೆಯೇ ಮುಖ್ಯವೆಂದು ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದಿರಲು ನಿರ್ಧರಿಸಿದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಸೋಮವಾರ ಬೆಳಗ್ಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.ಇನ್ನು ಉತ್ತರ ಪ್ರದೇಶದಲ್ಲಿ ಕೊರೊನ  ವೈರಸ್ ಹತೋಟಿಗೆ ತರಲು ಹಗಲು ರಾತ್ರಿ ಶ್ರಮಿಸುತ್ತಿರುವ ಯೋಗಿ ಆದಿತ್ಯನಾಥ ಅವರು ತನ್ನ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ .ಉತ್ತರ ಪ್ರದೇಶದಲ್ಲಿ ಸದ್ಯಕ್ಕೆ ತನ್ನ ಕರ್ತವ್ಯ ಅಗತ್ಯವಿರುವ ದೃಷ್ಟಿಯಲ್ಲಿ ಈ ನಿರ್ಧಾರವನ್ನು ಯೋಗಿ ಆದಿತ್ಯನಾಥ್ ಅವರು ತೆಗೆದುಕೊಂಡಿದ್ದಾರೆ.ಇನ್ನು ತಮ್ಮ ಕುಟುಂಬಸ್ಥರಿಗೆ ಕೂಡ ಅಂತ್ಯಕ್ರಿಯೆಯ ವಿಧಿ ವಿಧಾನದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಜತೆಗೆ ಅತಿ ಕಡಿಮೆ ಜನ ಸೇರಿ ಅಂತ್ಯಕ್ರಿಯೆಯನ್ನು ನಡೆಸುವಂತೆ ಸೂಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಗಂಭೀರ ಅನಾರೋಗ್ಯದಿಂದಿದ್ದ ಸಿಂಗ್‌ ಅವರು ಮಾರ್ಚ್ 15ರಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಕಳೆದ ರಾತ್ರಿ ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದರು.


Comments