ಕೊನೆಯುಸಿರೆಳೆದ ಮುತ್ತಪ್ಪ ರೈ

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ, ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ (68)  ಶುಕ್ರವಾರ ನಸುಕಿನ ಎರಡು ಗಂಟೆ ಸುಮಾರಿಗೆ ನಿಧನರಾದರು.ಒಂದು ವರ್ಷದ ಹಿಂದೆ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು ಕೆಲವು ದಿನದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಲ್ಲಿಯೇ ಕೊನೆಯುಸಿರು ಎಳೆದರು.

ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಒಬ್ಬ ಸಹೋದರಿ ಇದ್ದಾರೆ. ರಾಮನಗರ ತಾಲ್ಲೂಕಿನ  ಬಿಡದಿಯಲ್ಲಿ ಇರುವ ಅವರ ಸ್ವಗೃಹದಲ್ಲಿ ಕೆಲವೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸಾರ್ವಜನಿಕರಿಗೆ ಅಂತ್ಯಕ್ರಿಯೆ ಯಲ್ಲಿ ಪಾಲ್ಗೊಳ್ಳಲು ಅವಕಾಶ ಇಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.ಮೊದಲ‌ ಪತ್ನಿ ರೇಖಾ ಹಾಗೂ ಪುತ್ರರಾದ ರೋಖಿ, ರಿಕ್ತಿ ಅವರೊಂದಿಗೆ ಮುತ್ತಪ್ಪ ರೈ. ರೇಖಾ ಅನಾರೋಗ್ಯದಿಂದ ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು

Comments