ಪಾದರಾಯನಪುರದ ಜೆಡಿಎಸ್ ಕಾರ್ಪೊರೇಟರ್ ಇಮ್ರಾನ್ ಪಾಷಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ವರದಿ ಆಗಿದೆ. ಪಾದರಾಯನಪುರದ
ಕಂಟೈನ್‍ಮೆಂಟ್ ಝೋನ್‍ನಲ್ಲಿ ಓಡಾಡಿದ್ದ ಇಮ್ರಾನ್ ಪಾಷಾ ಅವರು ಶುಕ್ರವಾರ ಬೆಳ್ಳಗ್ಗೆ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು. ಸಂಜೆ ಬಂದ ರಿಪೋರ್ಟ್ ನಲ್ಲಿ ಸೋಂಕು ತಗುಲಿರುವುದು ಪತ್ತೆಯಾಗಿದೆ. ಹೀಗಾಗಿ ಇಮ್ರಾನ್ ಪಾಷ ಅವರ ಮನೆ ಇರುವ ಪಾದರಾಯನಪುರದ 13ನೇ ಕ್ರಾಸ್ ಅನ್ನು ಸೀಲ್‍ಡೌನ್ ಮಾಡಲಾಗಿದೆ ಮತ್ತು ಅವರ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ರಂಟೈನ್ ಮಾಡಲು ಸಿದ್ಧತೆ ನಡೆದಿದೆ ಎಂದು ವರದಿಗಳು ತಿಳಿಸಿವೆ .
Comments
Post a Comment