ಜನಾಂಗೀಯ ಪ್ರತಿಭಟನೆ : ಅಮೆರಿಕದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಧ್ವಂಸ ಮಾಡಿದ ಪ್ರತಿಭಟನಾಕಾರರು

ಅಮೆರಿಕದಲ್ಲಿ ನಡೆಯುತಿ ಗೊಂದಲದ ಬೆಳವಣಿಗೆಯೊಂದರಲ್ಲಿ, ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಹೊರಗೆ ಸ್ಥಾಪಿಸಲಾದ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಕಪ್ಪು ಜನಾಂಗೀಯ ಪ್ರತಿಭಟನಾಕಾರರು  ಧ್ವಂಸ ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವವರೇ ಈ ಕೃತ್ಯ ಎಸೆಗಿದ್ದಾರೆ ಎನ್ನಲಾಗಿದೆ. ಅಮೆರಿಕದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಯಾಗಿದೆ.

ಮಿನೆಸೊಟಾ ರಾಜ್ಯದ ಮಿನಿಯಾಪೊಲಿಸ್ ನಗರದಲ್ಲಿ ಆಫ್ರಿಕನ್ ಅಮೆರಿಕನ್ ಜನಾಂಗೀಯ 46 ವರ್ಷದ ಜಾರ್ಜ್ ಫ್ಲಾಯ್ಡ್ ಅವರನ್ನು ಪೊಲೀಸರು ಕಳೆದ ಸೋಮವಾರದಂದು ಬಂಧಿಸಿದ್ದರು. ಈ ವೇಳೆ ಫ್ಲಾಯ್ಡ್ ಸಾವನ್ನಪ್ಪಿದ್ದರು. ಆದರೆ, ಪೊಲೀಸ್ ಅಧಿಕಾರಿಯೊಬ್ಬರು ಫ್ಲಾಯ್ಡ್​ನ ಕುತ್ತಿಗೆಯನ್ನು ಕಾಲಿನಿಂದ ಒತ್ತಿ ಹಿಡಿದಿದ್ದ ದೃಶ್ಯವೊಂದು ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.ಈ ಹಿನ್ನಲೆಯಲ್ಲಿ ಆಫ್ರಿಕನ್ ಅಮೆರಿಕನ್ ಜನಾಂಗೀಯ ಪ್ರತಿಭಟನಾಕಾರರು ಬೀದಿಗೆ ಇಳಿದಿದ್ದರು.


Comments