ಡಿ.ಜೆ ಹಳ್ಳಿಯಲ್ಲಿ ಗಲಭೆಗೆ ಪ್ರಚೋದನೆ ನೀಡಿದ SDPI ಮುಖಂಡನ ಬಂಧನ

ನಿನ್ನೆ  ತಡ ರಾತ್ರಿ ಪುಂಡ ಮುಸ್ಲಿಂ ಯುವಕರ ಗುಂಪು   ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಸೇರಿ ಪೊಲೀಸ್ ಮತ್ತು ಮಾಧ್ಯಮದವರ ಮೇಲೆ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೂ 110 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹಲವು ಕಿಡಿಗೇಡಿಗಳು ತಲೆಮರೆಸಿಕೊಂಡಿದ್ದು ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ ಮತ್ತು ಗಲಭೆಯಲ್ಲಿ ದುಷ್ಕರ್ಮಿಗಳು ಕೇರಳದಿಂದ ಬಂದಿದ್ದಾರೆ ಎನ್ನಲಾಗಿದೆ 

ಇನ್ನು ಗಲಭೆ ಪ್ರಕರಣಕ್ಕೆ ಗಲಭೆಗೆ ಪ್ರಚೋದನೆ ನೀಡಿದರು ಎಂಬ ಹಿನ್ನೆಲೆಯಲ್ಲಿ ಬೆಂಗಳೂರಿನ ಜಿಲ್ಲಾ SDPI ಮುಖಂಡರೊಬ್ವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಅಪರಾಧ. ಇಂತಹ ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಎಲ್ಲರೂ ಸಂಯಮದಿಂದ ವರ್ತಿಸಬೇಕು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

 ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ’ ಎಂದು ಆರೋಪಿಸಿದ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿದ್ದರು .



Comments