2018ರಲ್ಲಿ ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆ ಕೇಸಿಗೆ ಸಂಬಂಧಪಟ್ಟಂತೆ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಸಂಪಾದಕ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಕೈಗೆತ್ತಿಕೊಂಡು ವಿಚಾರಣೆ ನಡೆಸಿ ಅರ್ನಾಬ್ ಗೋಸ್ವಾಮಿ ಮತ್ತು ಇನ್ನಿಬ್ಬರಿಗೆ 50000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಮಧ್ಯಂತರ ಜಾಮೀನು ನೀಡಿದೆ.
ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಗೋಸ್ವಾಮಿ ಮತ್ತು ಇತರ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಅಷ್ಟು ಮಾತ್ರವಲ್ಲದೆ ಆದೇಶವನ್ನು ತಕ್ಷಣವೇ ಪಾಲಿಸುವಂತೆ ನೋಡಿಕೊಳ್ಳುವಂತೆ ಅದು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿತು.
ಪ್ರಕರಣದಲ್ಲಿ ಗೋಸ್ವಾಮಿ ಹಾಗೂ ಇನ್ನಿಬ್ಬರಿಗೆ ಮಧ್ಯಂತರ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ಸೋಮವಾರ ನಿರಾಕರಿಸಿದ್ದರಿಂ ಮತ್ತು ಅದಕ್ಕಾಗಿ ಕೆಳನ್ಯಾಯಾಲಯಕ್ಕೆ ತೆರಳುವಂತೆ ಕೋರಿದ್ದರಿಂದ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
Arnab Goswami gets bail from Supreme Court after a week in custody. @dramadhikari writes in detail on what transpired in court. https://t.co/bteNuNVcYk
— Dhanya Rajendran (@dhanyarajendran) November 11, 2020
Comments
Post a Comment