ಆಸ್ಟ್ರಿಯಾ ರಾಜಧಾನಿ ವಿಯೆನ್ನಾದಲ್ಲಿ ನೈಟ್‌ಔಟ್ ಪಾರ್ಟಿಗಳು ನಡೆಯುತ್ತಿದ್ದ ಕೆಫೆಗಳು ಮತ್ತು ರೆಸ್ಟೊರೆಂಟ್ ಮೇಲೆ ಸೋಮವಾರ ರಾತ್ರಿ ಇಸ್ಲಾಮಿಕ್ ಉಗ್ರರು ಗುಂಡಿನ ದಾಳಿ ನಡೆಸಿದ್ದುಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ವಿಯೆನ್ನಾ ಪೊಲೀಸರು ಒಬ್ಬ ಉಗ್ರನನ್ನು ಕೊಂದು ಹಾಕಿದ್ದಾರೆ. ಇನ್ನೂ ಕೆಲವರು ತಪ್ಪಿಸಿಕೊಂಡಿರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ .
ಇನ್ನು ವಿಯೆನ್ನಾದಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರಧಾನಮಂದ್ರಿ ನರೇಂದ್ರ ಮೋದಿಯವರು ಆಘಾತ ವ್ಯಕ್ತಪಡಿಸಿದ್ದಾರೆ.''ವಿಯೆನ್ನಾದಲ್ಲಿನ ಭಯಾನಕ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಈ ದುರಂತ ಸಮಯದಲ್ಲಿ ಭಾರತ ಆಸ್ಟ್ರಿಯಾದೊಂದಿಗೆ ನಿಂತಿದೆ. ನನ್ನ ಆಲೋಚನೆಗಳು ಮೃತರು ಮತ್ತು ಅವರ ಕುಟುಂಬಗಳೊಂದಿಗೆ ಇವೆ.” ಎಂದು ತಿಳಿಸಿದ್ದಾರೆ.
Comments
Post a Comment