-ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡ ಇರುವುದು ಪೊಲೀಸ್ ತನಿಖೆಯಿಂದ ಬಯಲಾಗಿದ್ದು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
-ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ತಮ್ಮ ಮನೆಗೆ ಬೆಂಕಿ ಹಚ್ಚಿರುವ ಸಂಪತ್ ರಾಜ್ ವಿರುದ್ಧ ಪಕ್ಷ ಕ್ರಮ ಕೈಗೊಳ್ಳಬೇಕು. ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ.
-ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಅಧ್ಯಕ್ಷರಿಗೆ ಎಲ್ಲ ಬೆಳವಣಿಗೆಯ ಬಗ್ಗೆ ಮಾಹಿತಿ ನೀಡಿದ್ದೇನೆ. ಅವರು ಶಿಸ್ತು ಸಮಿತಿಗೆ ಪ್ರಕರಣವನ್ನು ನೀಡುವುದಾಗಿ ತಿಳಿಸಿದ್ದಾರೆ. ಶಿಸ್ತು ಸಮಿತಿ ವರದಿ ಬಂದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ ಎಂದು ಹೇಳಿದರು.
ಅಖಂಡ ಶ್ರೀನಿವಾಸ್ ಮೂರ್ತಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಡಿಕೆ.ಶಿವಕುಮಾರ್ ಅವರು, ಡಿ.ಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಯಾದ ಮಾತ್ರಕ್ಕೆ ಸಂಪತ್ ರಾಜ್ ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Comments
Post a Comment