ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ: ಹೆಗಲ ಮೇಲೆ ಕೇಸರಿ ಹಾಕಿ ,ಸದನದಲ್ಲಿ ಮೊಳಗಿತು ಜೈ ಶ್ರೀರಾಮ್ ಘೋಷಣೆ

 ಮಹತ್ವದ ಬೆಳವಣಿಗೆಯೊಂದರಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2020ಕ್ಕೆ ರಾಜ್ಯ ವಿಧಾನಸಭೆ ಅಂಗೀಕಾರ ನೀಡಿದೆ.ಈ ಮೂಲಕ ರಾಜ್ಯದಲ್ಲಿ ಇದೀಗ ಗೋಹತ್ಯೆ ನಿಷೇಧ ಕಾನೂನಿನ ಮಾನ್ಯತೆ ಪಡೆದುಕೊಂಡಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಕರುನಾಡು ಸಾಕ್ಷಿಯಾಗಿದೆ.ಗೋಹತ್ಯೆ ನಿಷೇಧ ಮಸೂದೆಗೆ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ, ಈ ಮಸೂದೆ ಯಾವುದೇ ಚರ್ಚೆಯಿಲ್ಲದೇ ಅಂಗೀಕಾರಗೊಂಡಿದೆ.


ಮಸೂದೆಗೆ ಅಂಗೀಕಾರ ದೊರೆತಿರುವುದನ್ನು ಸ್ವಾಗತಿಸಿದ ಬಿಜೆಪಿ ಸದಸ್ಯರು, ಜೈ ಶ್ರೀರಾಮ್ ಹಾಗೂ ಭಾರತ್ ಮಾತಾ ಕೀ ಜೈ ಘೋಷಣೆಗಳನ್ನು ಕೂಗಿ ಸಂತಸ ವ್ಯಕ್ತಪಡಿಸಿದರು. ಅಲ್ಲದೇ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್‌ನ್ನು ಹಿಂದೂ ವಿರೋಧಿ ಎಂದು ಜರಿಯಲಾಯಿತು.

Comments