ಬಾರಾಮುಲ್ಲಾದಲ್ಲಿ ಅಡಗಿ ಕುಳಿತಿರುವ ಇಬ್ಬರು ಉಗ್ರರ ಪೈಕಿ ಓರ್ವ ಫಿನಿಷ್, ಮುಂದುವರಿದ ಸೇನಾ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವಾನಿಗಾಮ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದ ಮಾಹಿತಿಯನ್ನು ಆದರಿಸಿ ಕಾರ್ಯಾಚರಣೆ ಆರಂಭಿಸಿದ ಭಾರತೀಯ ಸೇನಾಪಡೆಗಳು ಗುರುವಾರ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ವರದಿಯಾಗಿದೆ .
ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಯೋಧರು ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿತ್ತು, ಸ್ಥಳದಲ್ಲಿ ಉಗ್ರರು ಹಾಗೂ ಸೇನಾಪಡೆಗಳ ನಡುವೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿವೆ ಎಂದು ವರದಿಗಳು ತಿಳಿಸಿವೆ. ಇದೀಗ ಉಗ್ರರು ಅಡಗಿರುವ ಪ್ರದೇಶವನ್ನು ಭದ್ರತಾಪಡೆಗಳು ಸುತ್ತುವರೆದಿದ್ದು, ದಾಳಿಗೆ ದಿಟ್ಟ ಉತ್ತರವನ್ನು ನೀಡುತ್ತಿದ್ದಾರೆ.

Comments