ಹಿಜಾಬ್ ಧರಿಸೋದನ್ನು ಮುಂದುವರಿಸಿದರೆ ಮುಂದೆ ಕಾಲೇಜಿಗೆ ಪಂಚೆ ಹಾಗು ರುದ್ರಾಕ್ಷಿ ಮಾಲೆ ಧರಿಸಿ ಬರೋದಾಗಿ ಎಂದ ವಿದ್ಯಾರ್ಥಿಗಳು


 

ಉಡುಪಿಯ ಕುಂದಾಪುರದಲ್ಲಿ ಹಿಜಾಬ್ ವಿವಾದ ತೀವ್ರಗೊಂಡಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸೋದನ್ನು ಮುಂದುವರಿಸಿದರೆ ಮುಂದೆ ಕಾಲೇಜಿಗೆ ಪಂಚೆ ಹಾಗು ರುದ್ರಾಕ್ಷಿ ಮಾಲೆ ಧರಿಸಿ ಬರೋದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ

ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳಿಗೆ ಶುಕ್ರವಾರವೂ ಪ್ರವೇಶ ನಿರಾಕರಿಸಲಾಗಿದೆ. ಬೆಳಿಗ್ಗೆ ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕಾಲೇಜು ಸಿಬ್ಬಂದಿ ಗೇಟಿನಲ್ಲಿ ತಡೆದರು. ಆದರೆ, ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿ ಕಾಲೇಜು ಆವರಣ ಪ್ರವೇಶಿಸಿದರು. ಈ ಘಟನೆ ಬೆನ್ನಲ್ಲೇ ಕಾಲೇಜಿನಲ್ಲಿದ್ದ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿದರು. ಕೂಡಲೇ ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳಿಸಿದರು.

ಗೇಟಿನ ಮುಂದೆ ಕೆಲವು ವಿದ್ಯಾರ್ಥಿಗಳು ಜೈ ಶ್ರೀರಾಮ್ ಘೋಷಣೆ ಕೂಗಿದರು. ವಿದ್ಯಾರ್ಥಿಗಳ ಪೋಷಕರು ಕಾಲೇಜು ಗೇಟ್‌ ಬಳಿ ಜಮಾಯಿಸಿದ್ದರಿಂದ ಕೆಲಹೊತ್ತು ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಕಾಲೇಜಿಗೆ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.

Comments