ರಾಜ್ಯದ ಹಲವು ಕಾಲೇಜುಗಳಲ್ಲಿ ಈಗಾಗಲೇ ಭುಗಿಲೆದ್ದಿರುವ ಹಿಜಾಬ್ ವಿವಾದವು ಇದೀಗ ಹಲವು ಜಿಲ್ಲೆಗಳಿಗೆ ಕೂಡ ಹಬ್ಬಿಕೊಂಡಿದೆ.ಈ ಪೈಕಿ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಕೆಲವು ವಿದ್ಯಾರ್ಥಿಗಳು ಎಕಾ ಏಕಿ ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾದರುಈ ವೇಳೆ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಕೂಡಲೇ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾಲೇಜಿಗೆ ಭೇಟಿನೀಡಿ ವಿವಾದ ಬಗೆಹರಿಸಲು ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರು, ಕಾಲೇಜು ಪ್ರಾಂಶುಪಾಲರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಸದಸ್ಯರ ಸಭೆ ನಡೆಸಿದರು. ಆದರೆ, ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.
Comments
Post a Comment