ವಿಶ್ವಸಂಸ್ಥೆಯಲ್ಲಿ ಉಕ್ರೇನ್ ಪರ ನಿಲ್ಲದ ಭಾರತ: ಭಾರತೀಯ ವಿದ್ಯಾರ್ಥಿಗಳನ್ನು ಥಳಿಸಿದ ಉಕ್ರೇನ್ ಯೋಧರ ವಿಡಿಯೋ ವೈರಲ್

ಉಕ್ರೇನ್-ಪೋಲೆಂಡ್ ಗಡಿಯಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಂದ ತಾವು ತೊಂದರೆಗೆ ಸಿಲುಕಿರುವ ಬಗ್ಗೆ ಕರೆ ಮಾಡಿ ಅಲವತ್ತುಕೊಳ್ಳುತ್ತಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತವು ರಷ್ಯಾದ ಆಕ್ರಮಣವನ್ನು ಖಂಡಿಸದ ಕಾರಣ, ಉಕ್ರೇನಿಯನ್ ಸೇನಾ ಸಿಬ್ಬಂದಿ ತಮ್ಮನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಭಾರತೀಯ ವಿದ್ಯಾರ್ಥಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ.

ಪೋಲೆಂಡ್‌ಗೆ ಹೋಗಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳ ಕಡೆಗೆ ಉಕ್ರೇನ್ ಸೈನಿಕರು ಮತ್ತು ಪೊಲೀಸರು ತಮ್ಮ ವಾಹನಗಳನ್ನು ನುಗ್ಗಿಸಿ, ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಿಡಿದು ಥಳಿಸಿದ್ದಾರೆ. ಅಲ್ಲದೇ ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸಿರುವ ವಿಡಿಯೊ ತುಣುಕನ್ನು ವಿದ್ಯಾರ್ಥಿಗಳು ಹಂಚಿಕೊಂಡಿದ್ದಾರೆ.ಈ ಸಂಬಂಧ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

Comments