ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತನ ವಿಡಿಯೋ ವೈರಲ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ದೇಶದ ಹಲವು ಕಡೆ ಪ್ರತಿಭಟನೆ ನಡೆಸಿದರು .ಈ ಪೈಕಿ ಮಂಡ್ಯದಲ್ಲಿ ಬಿಜೆಪಿಗರು ಪ್ರತಿಭಟನೆ ಮಾಡುವ ವೇಳೆ ಕಾರ್ಯಕರ್ತನೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಎಡವಟ್ಟು ಮಾಡಿದ್ದಾನೆ .ಪ್ರತಿಭಟನೆ ವೇಳೆ ಈ ರೀತಿ ಘೋಷಣೆ ಕೂಗಿ ಎಡವಟ್ಟು ಮಾಡಿದಾಗ ಪಕ್ಕದಲ್ಲೇ ಇದ್ದ ಇನ್ನೋರ್ವ ವ್ಯಕ್ತಿ ಕೂಡಲೇ ಕಾರ್ಯಕರ್ತನ ಬಾಯಿ ಮುಚ್ಚಿಸಿದ್ದಾರೆ .ಘಟನೆ ಸಂಬಂಧಿಸಿ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

Comments