ಉಡುಪಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ವಿಚಾರ ಖಂಡಿಸಿ ಜಿಲ್ಲೆಯಲ್ಲಿ ಎಬಿವಿಪಿ ಪ್ರತಿಭಟನೆ

ಉಡುಪಿಯ ಜಿಲ್ಲೆಯ ಕಾಲೇಜೊಂದರ ಬಾತ್‌ರೂಂನಲ್ಲಿ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಘಟನೆ ವಿರುದ್ಧ ಇಂದು ಉಡುಪಿಯಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಸರ್ಕಾರದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ, ಗೃಹಸಚಿವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಉಡುಪಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದರು.ಇನ್ನು ಜಿಲ್ಲೆಯ ಶಾಸಕ ಯಶಪಾಲ್ ಸುವರ್ಣ ಅವರು ಪ್ರತಿಭಟನಾಕಾರರ ಜೊತೆ ಕೈ ಜೋಡಿಸಿದ್ದರು.

Comments